Nov 05: ಮಂಗಳೂರಿನ ಬೆಂದೂರಿನಲ್ಲಿರುವ ಸಂತ ಥೆರೇಸಾ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಉಪ ಪ್ರಾಂಶುಪಾಲರಾದ ಭಗಿನಿ ಶಾಂತಿ ಕ್ಲೇರ್ ಇವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ರಾಜ್ಯೋತ್ಸವ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ಡೆಲ್ರಿನಾ ಕನ್ನಡ ನಾಡು, ನುಡಿ ಮತ್ತು ಸಂಸ್ಕøತಿಯ ವೈಭವದ ಬಗ್ಗೆ ವಿವರಣೆ ನೀಡಿದರು. ಕನ್ನಡ ನಾಡಿನ ಸಂಸ್ಕøತಿಯನ್ನು ಬಿಂಬಿಸುವ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟರು. ಶಾಲಾ ವಿದ್ಯಾರ್ಥಿನಿ ಕುಮಾರಿ ಸ್ನೇಹಲ್ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Mr Rajesh G, Asst Teacher
St Theresa’s School, Bendur