Feb 29: ದಿನಾಂಕ 28 ಫೆಬ್ರವರಿರಂದು ನಮ್ಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯಿನಿಯರಾದ ಸಿ.ಕವಿತಾರವರು ವಹಿಸಿಕೊಂಡಿದ್ದರು. ಕಾರ್ಯಕ್ರಮಕ್ಕೆ ವಿಶೇಷ ಉಪನ್ಯಾಸಕರಾಗಿ ಶ್ರೀಯುತ ಮೋಹನರೆಡ್ಡಿ ವಿಜ್ಞಾನ ಶಿಕ್ಷಕರು ಹಾಗೂ ಶಾಲೆಯ ಪಾಲಕ ಪೋಷಕ ಸಂಘದ ಉಪಾಧ್ಯಕ್ಷರಾದ ಶ್ರೀಯುತ ಶರಣಗೌಡ ಪಾಟೀಲ, ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾದ ಶ್ರೀಯುತ ಬಸವರಾಜ ಬೊಮ್ಮನಳ್ಳಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಾರ್ಥನಾ ನೃತ್ಯದ ಮೂಲಕ ಆರಂಭಿಸಲಾಯಿತು. ನಂತರ ವಿಜ್ಞಾನ ಪ್ರಯೋಗದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಕುರಿತು ಶ್ರೀಯುತ ಮೋಹನ ರೆಡ್ಡಿಯವರು ರಾಷ್ಟೀಯ ವಿಜ್ಞಾನ ದಿನಾಚರಣೆಯ ಮಹತ್ವವನ್ನು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಂಡು ಸಂಶೋಧನಾತ್ಮಕ ಚಟುವಟಿಕೆಗಳನ್ನು ನಡೆಸಬೇಕು ಎಂದು ಹೇಳಿದರು. ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ವಿಜ್ಞಾನಕ್ಕೆ ವೈಜ್ಞಾನಿಕ ಸಂಶೋಧನೆಗೆ ಹೆಚ್ಚು ಮಹತ್ವವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಕೇವಲ ಇಂಜಿನಿಯರ್, ಡಾಕ್ಟರ ಮಾತ್ರವಲ್ಲದೆ ವಿಜ್ಞಾನಕ್ಕೆ ಸಂಬಂಧ ಪಟ್ಟ ಹಲವಾರು ಕೋರ್ಸ್‍ಗಳ ಬಗ್ಗೆ ತಿಳಿದುಕೊಂಡು ವಿಜ್ಞಾನಿಗಳಾಗಬೇಕೆಂದು ಕರೆ ನೀಡಿದರು. ನಂತರ ವಿದ್ಯಾರ್ಥಿಗಳು ವಿಜ್ಞಾನಕ್ಕೆ ಸಂಬಂಧಪಟ್ಟ ನಾಟಕವನ್ನು ಪ್ರದರ್ಶಿಸಿದರು. ನಂತರ ವಿದ್ಯಾರ್ಥಿಗಳು ತಾವು ತಯಾರಿಸಿದ ಹಲವಾರು ವಿಜ್ಞಾನ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಈ ಪ್ರದರ್ಶನವನ್ನು ಬೇರೆ ಶಾಲೆಯ ಮಕ್ಕಳು ಬಂದು ವಿಕ್ಷೀಸಿದರು. ಕಾರ್ಯಕ್ರಮವನ್ನು ಶ್ರೀಯುತ ವಿಶ್ವನಾಥ ಸರ್ ಅವರು ನಿರೂಪಿಸಿದರು. ಶ್ರೀಯುತ ಬಸವರಾಜ ಸರ್ ಅವರು ಸ್ವಾಗತಿಸಿದರು. ಶ್ರೀಯುತ ಮಹೇಶ ಸರ್ ಅವರು ವಂದನಾರ್ಪಣೆಯನ್ನು ಮಾಡಿದರು.
ಶ್ರೀಯುತ ಶೇಷಪ್ಪ, ಸಹ ಶಿಕ್ಷಕರು
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ