Nov 1: ಸ್ಥಳೀಯ ಲೊಯಲಾ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 01. 11. 2016 ರಂದು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತಿ ವಿಜ್ರಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ವೇದಿಕೆಯಲ್ಲಿರುವ ಎಲ್ಲ ಗಣ್ಯರು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
5ನೇ ತರಗತಿಯ ‘ಅ’ ಮಕ್ಕಳು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ 5ನೇ ವರ್ಗ ‘ಅ’3ನೇ ‘ಬ’ ವರ್ಗ ಮತ್ತು 1ನೇ ತರಗತಿಯ ಅ’ ವರ್ಗದ ವಿದ್ಯಾರ್ಥಿಗಳು ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಮುಖ್ಯ ಅತಿಥಿ ಸ್ಥಾನ ವಹಿಸಿದ್ದ ಕ.ಸಾ.ಪ. ಅಧ್ಯಕ್ಷರಾದ ಶ್ರೀಯುತ ಶರಣು ಗೋಗೇರಿಯವರು ಕನ್ನಡದ ಶಾಸ್ತ್ರೀಯ ಸ್ಥಾನಮಾನದ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾನಿಯರಾದ ಪೂಜ್ಯ ಸಿಸ್ಟರ್ ವೆರೋನಿಕಾರವರು ಕನ್ನಡ ನಾಡು, ನುಡಿ, ಜಲ, ಭಾಷೆಯ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಲೊಯಲಾ ಪ.ಪೂ. ಕಾಲೇಜಿನ ಪ್ರಾಚಾರ್ಯರಾದ ಪೂಜ್ಯ ಸಿಸ್ಟರ್‍ರೋಜ ಆನ್ ರವರು ಕರ್ನಾಟಕ ವಿಶ್ವ ವಿದ್ಯಾಲಯದ ಪ್ರಾದ್ಯಾಪಕರಾದ ಶ್ರೀಮತಿ ತಾರಾರವರು, ಶ್ರೀನಿವಾಸ ಕುಲಕರ್ಣಿ ಯವರು ಉಪಸ್ಥಿತರಿದ್ದರು. ಕಾರ್ಯಕ್ರಮವು ನಾಡಗೀತೆಯೊಂದಿಗೆ ಮತ್ತು ರಾಷ್ಟ್ರಗೀತೆಯೊಂದಿಗೆ ಮುಕ್ತಾಯವಾಯಿತು.