June 09: ದಿ.05.06.2018 ರಂದು ಬೆಥನಿ ಪ್ರೌಢ, ಚಿತ್ತಾಪುರ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕಿಯವರಾದ ಸಿ.ಸೆಲಿನ್ ರವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀಯುತ ಮಲ್ಲಿಕಾರ್ಜುನ ಮುಡಬೂಳಕರ್, ಶ್ರೀಯುತ ಶರಣಗೌಡ ಪಾಡೀಲ, ಬಸವರಾಜ ಬೊಮ್ಮನಳ್ಳಿ ಹಾಗೂ ಶ್ರೀಮತಿ ಪ್ರಭಾವತಿ ಆಗಮಿಸಿದ್ದರು.
ಕಾರ್ಯಕ್ರಮವನ್ನು ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಸಿ.ಸೆಲಿನ್‍ರವರು ಪರಿಸರ ದಿನಾಚರಣೆಯನ್ನು ಕುರಿತು ಮಾತನಾಡಿದರು. ಇಂದಿನ ದಿನದಲ್ಲಿ ಪರಿಸರ ಎಷ್ಟು ಮಾಲಿನ್ಯವಾಗಿದೆ. ಇದರಿಂದ ಮಾನವನು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ. ಅದಕ್ಕಾಗಿ ಪರಿಸರವನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂಬ ಸಂದೇಶವನ್ನಿತ್ತರು. ಮಕ್ಕಳು ಪರಿಸರ ಜಾಗೃತಿಯನ್ನು ಕುರಿತು ಚಿಕ್ಕ ನಾಟಕವನ್ನು ಪ್ರದರ್ಶಿಸಿದರು. ಕೊನೆಗೆ ಅತಿಥಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಹಲವು ಸಸಿಗಳನ್ನು ನೆಡುವುದರ ಮೂಲಕ ಅರ್ಥಪೂರ್ಣವಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಶ್ರಿಯುತ ವಿಶ್ವನಾಥ ಕುಂಬಾರ
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ