ದಿನಾಂಕ 05.10.2018ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಲಬುರಗಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಅದರಲ್ಲಿ ಕು.ವಿಜಯಲಕ್ಷ್ಮೀ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವರು. ಧಾರ್ಮಿಕ ಪಠಣ ಸಂಸ್ಕøತದಲ್ಲಿ ದ್ವೀತೀಯ ಸ್ಥಾನ ಹಾಗೂ ಶೀಫಾ ಸಾಹೆರ ಹಿಂದಿ ಭಾಷಣದಲ್ಲಿ ದ್ವೀತಿಯ ಸ್ಥಾನ ಗಳಿಸಿರುವರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಸಂಚಾಲಕರಾದ ಸಿಸ್ಟರ ಸೆಲಿನ್, ಮುಖ್ಯೋಪಾಧ್ಯಾಯಿನಿ ಸಿಸ್ಟರ ಕವಿತಾ ಹಾಗೂ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಮುಂದಿನ ಸ್ಪರ್ಧೆಗಳಲ್ಲಿ ಶುಭವನ್ನು ಕೋರಿದರು.
ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ