Oct 12: ದಿನಾಂಕ : 04.09.2018ರ ಮಂಗಳವಾರದಂದು ಚಿತ್ತಾಪೂರ ಪಟ್ಟಣದ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಮ್ಮ ಶಾಲೆಯ ಅನೇಕ ಮಕ್ಕಳು ಭಾಗವಹಿಸಿದ್ದರು. ಪ್ರತಿಭಾ ಕಾರಂಜಿಯಲ್ಲಿರುವ ಪ್ರತಿಯೊಂದು ಸ್ಪರ್ಧೆಯಲ್ಲೂ ಮಕ್ಕಳು ಅತಿ ಉತ್ಸಾಹದಿಂದ ಪಾಲ್ಗೊಂಡು ಬಹಳಷ್ಟು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡು ನಮ್ಮ ಶಾಲೆಯ ಕೀರ್ತಿ ಬೆಳಗಿದ್ದಾರೆ.
ದಿ. 06.09.2018ರ ಗುರುವಾರದಂದು ಚಿತ್ತಾಪೂರ ತಾಲ್ಲೂಕಾ ಮಟ್ಟದ ಪ್ರತಿಭಾ ಕಾರಂಜಿ ನಮ್ಮ ಶಾಲೆಯಲ್ಲಿಯೇ ಆಯೋಜಿಸಲಾಗಿತ್ತು. ವಲಯ ಮಟ್ಟದದಲ್ಲಿ ಪ್ರಥಮ ಮತ್ತು ದ್ವೀತಿಯ ಸ್ಥಾನ ಗಳಿಸಿದ ಎಲ್ಲ ಮಕ್ಕಳು ಅತಿ ವಿಜೃಂಭಣೆಯ ತಯಾರಿಯಿಂದ ಭಾಗವಹಿಸಿದ್ದರು. ಬಹಳಷ್ಟು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿ ನಾಲ್ಕು ಪ್ರಥಮ ಉಳಿದೆಲ್ಲ ಸ್ಪರ್ಧೆಗಳಲ್ಲಿ ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಪ್ರಥಮ ಸ್ಥಾನವನ್ನು ಪಡೆದ ಮಕ್ಕಳು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಅವರಿಗೆ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ಕೋರುತ್ತೇವೆ.
ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ