ದಿನಾಂಕ 25.01.2020ರಂದು ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಜಿಲ್ಲಾಡಳಿತ ಕಲಬುರಗಿ ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೇ, ನಾಟಕ, ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ಕಲಬುರಗಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿ ಕು.ಭಾಗ್ಯರಾಜ ಇಂಗ್ಲೀಷ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಇವನಿಗೆ ಜಿಲ್ಲಾ ಸಿ.ಇ.ಓ ರವರು ಪ್ರಶಂಸಾ ಪತ್ರ ನೀಡಿ ಅಭಿನಂದಿಸಿದರು.
ಶ್ರೀಯುತ ದೇವಪ್ಪ, ಸಹ ಶಿಕ್ಷಕರು
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ