ಪುತ್ತೂರು ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಡ್ಯ ಜಿಲ್ಲೆಯ ನಾಗ ಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ಕಬ್ಬಡಿ ಪಂದ್ಯಾಟದಲ್ಲಿ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಬಾಲಕಿಯರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟಕ್ಕೆ ಆಯ್ಕೆಯಾಗಿದೆ. ಕಳೆದ ಬಾರಿಯ ಶೈಕ್ಷಣಿಕ ಸಾಲಿನ ಕಬ್ಬಡಿ ಪಂದ್ಯಟ್ಟದಲ್ಲಿ ಶಾಲೆಯಿಂದ ಓರ್ವ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ಈ ಸಾಲಿನ ಪಂದ್ಯಾಟದಲ್ಲಿ ಶಾಲಾ ಬಾಲಕಿಯರ ಪೂರ್ಣ ಪ್ರಮಾಣದ ತಂಡವು ಮೈಸೂರು ವಿಭಾಗ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ತನ್ನ ಮುಡಿಗೇರಿಸಿಕೊಂಡು ಇದೀಗ ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದು ಪುತ್ತೂರಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಮಿಂಚಿದ್ದಾರೆ. ಮುಂದೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ರಾಜ್ಯಪೇಟೆಯಲ್ಲಿ ನಡೆಯುವ ರಾಷ್ಟ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ.
ಸಿ. ವೆನಿಶಾ ಬಿ.ಎಸ್, ಮುಖ್ಯೋಪಾಧ್ಯಾಯಿನಿ
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ, ಪುತ್ತೂರು, ದರ್ಬೆ