ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನದಲ್ಲಿ ನಡೆದ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆ, ದರ್ಬೆ ಬಾಲಕಿಯರ ತಂಡವು, ಪ್ರಥಮ ಸ್ಥಾನ ಪಡೆದು ರಾಷ್ಟ್ರ್ರಮಟ್ಟಕ್ಕೆ ಆಯ್ಕೆಯಾಗಿದೆ. ಕಳೆದ ಬಾರಿಯ ಶೈಕ್ಷಣಿಕ ಸಾಲಿನ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯಿಂದ ಓರ್ವ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಪ್ರಸ್ತುತ ಸಾಲಿನ ಪಂದ್ಯಾಟದಲ್ಲಿ ಶಾಲಾ ಬಾಲಕಿಯರ ಪೂರ್ಣ ಪ್ರಮಾಣದ ತಂಡವು ಮೈಸೂರು ವಿಭಾಗ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡು ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಮುಂದೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ರಾಜ್ಯಪೇಟೆಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದೆ. ಇವರಿಗೆ ಬೆಥನಿ ಸಂಸ್ಥೆಯ ಮತ್ತು ಶಾಲಾ ಆಡಳಿತ ಮಂಡಳಿಯ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಮತ್ತು ಮುಂದಿನ ಯಶಸ್ಸು ನಿಮ್ಮದಾಗಲಿ ಎಂದು ಹಾರೈಸುತ್ತೇವೆ.
ಬಾಲಕೃಷ್ಣ. ಪಿ, ಸಹಶಿಕ್ಷಕರು
ಲಿಟ್ಲ್ ಫ್ಲವರ್ ಶಾಲೆ, ದರ್ಬೆ, ಪುತ್ತೂರು